ನವದೆಹಲಿ: ಕಾನೂನು ಸುವ್ಯವಸ್ಥೆ ಹಾಗೂ ಭದ್ರತೆ ದೃಷ್ಟಿಯಿಂದ ಕಾಶ್ಮೀರದ ಅನಂತನಾಗ್ ಲೋಕಸಭಾ ಕ್ಷೇತ್ರದಲ್ಲಿ ಮೇ 25ರಂದು ನಡೆಯಬೇಕಿದ್ದ ಉಪ ಚುನಾವಣೆಯನ್ನು ಚುನಾವಣಾ ಆಯೋಗ ರದ್ದುಪಡಿಸಿದೆ.
ಈ ಮೊದಲು ಏ.12ರಂದು ಚುನಾವಣೆ ನಡೆಸಲು ಆಯೋಗ ಸಿದ್ಧತೆ ನಡೆಸಿತ್ತು. ಆದರೆ, ಕಾಶ್ಮೀರ ಕಣಿವೆಯಲ್ಲಿನ ಕಾನೂನು ಸುವ್ಯವಸ್ಥೆಯ ಸಮಸ್ಯೆಯಿಂದಾಗಿ ಮೇ 25ಕ್ಕೆ ಚುನಾವಣೆಯನ್ನು ಮುಂದೂಡಿತ್ತು.
ಈ ಸಂಬಂಧ ಚುನಾವಣಾ ಆಯೋಗ ಕಳೆದ ರಾತ್ರಿ 10 ಪುಟಗಳ ಆದೇಶ ಪ್ರತಿಯನ್ನು ಹೊರಡಿಸಿದ್ದು, ಕಾಶ್ಮೀರದಲ್ಲಿನ ಪ್ರಸ್ತುತ ಪರಿಸ್ಥಿತಿ ಹಾಗೂ ಶಾಂತಿಯುತವಾಗಿ ಚುನಾವಣೆ ನಡೆಸಲು ಸಾಕಷ್ಟು ಭದ್ರತಾ ಸಿಬ್ಬಂದಿ ಕೊರತೆಯಿಂದಾಗಿ ಚುನಾವಣೆಯನ್ನು ರದ್ದುಪಡಿಸಲಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.
ಆದರೆ, ಮೇ 25ರಂದೇ ಚುನಾವಣೆ ನಡೆಸಬೇಕು ಎಂದ ಕೆಲ ಪಕ್ಷಗಳು ಚುನಾವಣಾ ಆಯೋಗಕ್ಕೆ ಒತ್ತಾಯಿಸಿವೆ. ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರು ಜುಲೈನಲ್ಲಿ ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಈ ಸ್ಥಾನ ತೆರವಾಗಿತ್ತು.
No comments:
Post a Comment