ಅಹಮದಾಬಾದ್: ಏಷ್ಯಾದಲ್ಲಿ ಚೀನಾದ ಪ್ರಭುತ್ವಕ್ಕೆ ಸೆಡ್ಡು ಹೊಡೆಯಲು ಮಾಸ್ಟರ್ ಪ್ಲಾನ್ ರೂಪಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಏಷ್ಯಾ ಮತ್ತು ಆಫ್ರಿಕಾ ರಾಷ್ಟ್ರಗಳ ನಡುವೆ ಸಂಬಂಧ ಬೆಸೆಯಲು ‘ಏಷ್ಯಾ-ಆಫ್ರಿಕಾ ಅಭಿವೃದ್ಧಿ ಕಾರಿಡಾರ್’ ಯೋಜನೆಯನ್ನು ಅನುಷ್ಠಾನಗೊಸಬೇಕಾದ ಅಗತ್ಯವಿದೆ ಎಂದು ತಿಳಿಸಿದ್ದಾರೆ.
ಗುಜರಾತ್ನ ಅಹಮದಾಬಾದ್ನಲ್ಲಿ ನಡೆಯುತ್ತಿರುವ ಆಫ್ರಿಕಾ ಅಭಿವೃದ್ಧಿ ಬ್ಯಾಂಕ್ನ 52ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಪ್ರಧಾನಿ ಮೋದಿ ತಮ್ಮ ಆಶಯವನ್ನು ವ್ಯಕ್ತಪಡಿಸಿದ್ದಾರೆ. ‘ಒನ್ ಬೆಲ್ಟ್, ಒನ್ ರೋಡ್’ ಆರ್ಥಿಕ ಕಾರಿಡಾರ್ ರೂಪಿಸಲು ಚೀನಾ ಪ್ರಯತ್ನ ನಡೆಸುತ್ತಿರುವ ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಏಷ್ಯಾ ಮತ್ತು ಆಫ್ರಿಕಾ ರಾಷ್ಟ್ರಗಳ ನಡುವೆ ದ್ವಿಪಕ್ಷೀಯ ಸಂಬಂಧವನ್ನು ವೃದ್ಧಿಗೊಳಿಸುವ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.
ನಾನು ಜಪಾನ್ಗೆ ತೆರಳಿದ್ದ ಸಂದರ್ಭದಲ್ಲಿ ಜಪಾನ್ ಪ್ರಧಾನಿ ಶೀಂಜೋ ಅಬೆ ಅವರೊಂದಿಗೆ ಏಷ್ಯಾ ಮತ್ತು ಆಫ್ರಿಕಾ ನಡುವೆ ಅಭಿವೃದ್ಧಿ ಕಾರಿಡಾರ್ ರೂಪಿಸುವ ಮಹತ್ವದ ಕುರಿತು ಚರ್ಚೆ ನಡೆಸಿದ್ದೆ. ಭಾರತ ಮತ್ತು ಜಪಾನ್ ಸಂಶೋಧನಾ ಸಂಸ್ಥೆಗಳು ಈಗಾಗಲೇ ಏಷ್ಯಾ-ಆಫ್ರಿಕಾ ಅಭಿವೃದ್ಧಿ ಕಾರಿಡಾರ್ ರೂಪಿಸುವ ಸಂಬಂಧ ವರದಿ ಸಿದ್ದಪಡಿಸಿದ್ದು, ಶೀಘ್ರ ಅದನ್ನು ಅನುಷ್ಠಾನಗೊಳಿಸುವ ಕಾರ್ಯ ಪ್ರಾರಂಭಿಸಲಾಗುವುದು. ಭಾರತ, ಜಪಾನ್ ಮತ್ತು ಇತರ ಸಮಾನ ಮನಸ್ಕ ರಾಷ್ಟ್ರಗಳು ಕೌಶಲ್ಯ ವೃದ್ಧಿ, ಮೂಲ ಸೌಕರ್ಯ ಅಭಿವೃದ್ಧಿ, ಉತ್ಪಾದನೆ ಮತ್ತು ಸಂಪರ್ಕ ವ್ಯವಸ್ಥೆ ಅಭಿವೃದ್ಧಿ ಪಡಿಸಲು ಆಫ್ರಿಕಾ ರಾಷ್ಟ್ರಗಳಿಗೆ ನೆರವು ನೀಡಲಿದೆ ಎಂದು ಮೋದಿ ತಿಳಿಸಿದರು.
ಕಳೆದ 20 ವರ್ಷಗಳಲ್ಲಿ ಆಫ್ರಿಕಾ ರಾಷ್ಟ್ರಗಳಲ್ಲಿ ಭಾರತ ಸುಮಾರು 54 ಬಿಲಿಯನ್ ಡಾಲರ್ ಹೂಡಿಕೆ ಮಾಡಿದೆ. 2014ರಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಆಫ್ರಿಕಾ ದೇಶಗಳೊಂದಿಗೆ ದ್ವಿಪಕ್ಷೀಯ ಬಾಂಧವ್ಯ ಮತ್ತು ಆರ್ಥಿಕ ಸಂಬಂಧವನ್ನು ವೃದ್ಧಿಗೊಳಿಸಲು ಒತ್ತು ನೀಡಲಾಗಿದೆ ಎಂದು ಮೋದಿ ಮಾಹಿತಿ ನೀಡಿದರು.

No comments:
Post a Comment