Tuesday, June 6, 2017

ಪ್ರಚಲಿತ ವಿದ್ಯಮಾನ : ಜೂನ್ 2017 : ಜಿಎಸ್‌ಎಲ್‌ವಿ ಯಶಸ್ವಿಯಾಗಿ ಕಕ್ಷೆ ಸೇರಿದ ಜಿಸ್ಯಾಟ್‌ –19 ಉಪಗ್ರಹ

ಶ್ರೀಹರಿಕೋಟಾ: ಜಿಸ್ಯಾಟ್–19 ಉಪಗ್ರಹವನ್ನು ಹೊತ್ತ ಭಾರತದ ಅತ್ಯಂತ ದೈತ್ಯ ರಾಕೆಟ್ ಜಿಎಸ್‌ಎಲ್‌ವಿ ಮಾರ್ಕ್ 3 ಸೋಮವಾರ ಸಂಜೆ ಬಾಹ್ಯಾಕಾಶಕ್ಕೆ ಚಿಮ್ಮಿದೆ. ಉಡಾವಣೆಗೊಂಡ 21 ನಿಮಿಷಗಳಲ್ಲಿ ಉಪಗ್ರಹ ಯಶಸ್ವಿಯಾಗಿ ಕಕ್ಷೆ ಸೇರಿದೆ.
ಭಾರಿ ವೇಗದ ಮತ್ತು ಉಪಗ್ರಹ ಆಧರಿತ ಅಂತರ್ಜಾಲ ಸಂಪರ್ಕ ಸೇವೆಗೆ ಈ ಉಪಗ್ರಹ ನೆರವಾಗಲಿದೆ.
640 ಟನ್‌ ತೂಕ ಮತ್ತು 42.23 ಮೀಟರ್‌ ಉದ್ದದ ಜಿಎಸ್‌ಎಲ್‌ವಿ ಮಾರ್ಕ್ 3 ಉಡಾವಣಾ ವಾಹಕವು ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಗೊಂಡಿತ್ತು.

No comments:

Post a Comment

Kannada GK You Tube Channel

🎞 *ಕನ್ನಡ ಜ್ಞಾನ ಭಂಡಾರ - Kannada Jnana Bhandara* 🎥📚 YouTube Channel ಕನ್ನಡ ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನದ ವೀಡಿಯೋಗಳಿಗಾಗಿ ನಮ್ಮ ಯೂ ಟ್...