ನವದೆಹಲಿ: ಪಾಕಿಸ್ತಾನದ ಗಡಿ ನಿಯಂತ್ರಣಾ ರೇಖೆಯಲ್ಲಿ ಉಗ್ರರ ದಾಳಿ ಹಾಗೂ ಈಶಾನ್ಯ ಗಡಿಯಲ್ಲಿ ಚೀನಾದ ತಂಟೆಯಿಂದ ಭಾರತಕ್ಕೆ ಭದ್ರತಾ ಆತಂಕ ಎದುರಾಗಿರುವ ಬೆನ್ನಲ್ಲೇ ಭಾರತೀಯ ವಾಯುಪಡೆಗಳಿಗೆ ಯುದ್ಧವಿಮಾನಗಳ ಕೊರತೆ ಕಾಡುತ್ತಿದೆ ಎಂದು ವಾಯುಪಡೆಯ ಮುಖ್ಯಸ್ಥ ಬಿ.ಎಸ್. ಧನೋವಾ ಹೇಳಿದ್ದಾರೆ. ಯುದ್ಧ ವಿಮಾನಗಳ ಸಂಖ್ಯೆಯನ್ನು ಕ್ರಿಕೆಟ್ ತಂಡಕ್ಕೆ ಹೋಲಿಸಿರುವ ಅವರು , 11 ಜನರಿರುವ ತಂಡದಲ್ಲಿ ಕೇವಲ ಏಳು ಜನರು ಆಟವಾಡಿದಂತೆ ಎಂದಿದ್ದಾರೆ.
ನೆರೆಯ ರಾಷ್ಟ್ರಗಳ ಉಗ್ರ ದಾಳಿಗೆ ತಕ್ಕ ಪ್ರತ್ಯುತ್ತರ ನೀಡಲು ಭಾರತೀಯ ವಾಯುಪಡೆ ಸಜ್ಜಾಗಿದೆ. ನಕ್ಸಲರು, ಮಾವೋವಾದಿಗಳ ಮೇಲೆ ವೈಮಾನಿಕ ದಾಳಿ ನಡೆಸುವುದು ಸರಿಯಲ್ಲ. ಆದರೆ, ಕೇಂದ್ರ ಸರ್ಕಾರ ಆದೇಶ ನೀಡಿದಲ್ಲಿ ಮಾವೋವಾದಿಗಳ ವಿರುದ್ಧ ವೈಮಾನಿಕ ದಾಳಿ ನಡೆಸಲು ಸಿದ್ಧ ಎಂದು ಅವರು ತಿಳಿಸಿದ್ದಾರೆ.
ಪರಿಸ್ಥಿತಿ ಎದುರಿಸಲು ಸಿದ್ಧ: ಭಯೋ ತ್ಪಾದನೆ, ಕಾಶ್ಮೀರದಲ್ಲಿನ ಉದ್ವಿಗ್ನತೆ, ಛತ್ತೀಸ್ಗಢ ಸಹಿತ ಹಲವು ರಾಜ್ಯಗಳಲ್ಲಿ ನಕ್ಸಲರ ದಾಳಿ ಮತ್ತಿತರ ಭದ್ರತಾ ಆತಂಕಗಳನ್ನು ಎದುರಿಸಲು ಸೇನೆ ಸನ್ನದ್ಧವಾಗಿದೆ.
No comments:
Post a Comment