ಪ್ಯಾರಿಸ್: ಗೆಲ್ಲುವ ಕುದುರೆಗೆ ಕಡಿವಾಣ ಹಾಕಲು ಎದುರಾಳಿಗೆ ಸಾಧ್ಯವಾಗಲಿಲ್ಲ. ಸ್ವಿಟ್ಜರ್‌ಲೆಂಡ್‌ನ ಸ್ಟಾನಿ ಸ್ಲಾನ್ ವಾವ್ರಿಂಕಾ ಅವರ ಸವಾಲನ್ನು ಸುಲಭವಾಗಿ ಮೆಟ್ಟಿ ನಿಂತ ಸ್ಪೇನ್‌ನ ರಫೆಲ್ ನಡಾಲ್ ಫ್ರೆಂಚ್ ಓಪನ್ ಟೆನಿಸ್ ಟೂರ್ನಿಯಲ್ಲಿ ದಾಖಲೆಯ ಪ್ರಶಸ್ತಿ ಮುಡಿಗೇರಿಸಿಕೊಂಡರು.
ರೊಲ್ಯಾಂಡ್ ಗ್ಯಾರೋಸ್‌ನಲ್ಲಿ ಭಾನುವಾರ ನಡೆದ ಪುರುಷರ ಸಿಂಗಲ್ಸ್ ವಿಭಾಗದ ಪ್ರಶಸ್ತಿ ಸುತ್ತಿನ ಹಣಾಹಣಿಯಲ್ಲಿ ಅವರು 6–2, 6–3, 6–1ರಿಂದ ಜಯ ಸಾಧಿಸಿದರು. ಈ ಮೂಲಕ ಟೂರ್ನಿಯಲ್ಲಿ ಹತ್ತು ಬಾರಿ ಪ್ರಶಸ್ತಿಗಳನ್ನು ಗೆದ್ದ ದಾಖಲೆ ತಮ್ಮದಾಗಿಸಿಕೊಂಡರು. 15 ಗ್ರ್ಯಾಂಡ್‌ಸ್ಲಾಮ್ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡ ಹೆಗ್ಗಳಿಕೆಯೂ ಅವರದಾಯಿತು.
ಮೊಣಕಾಲಿನ ಗಾಯದಿಂದ 2012 ಮತ್ತು 2013ರ ಅವಧಿಯಲ್ಲಿ ಏಳು ತಿಂಗಳು ಅಂಗಳಕ್ಕೆ ಇಳಿಯಲು ಸಾಧ್ಯವಾಗದ ನಡಾಲ್ 2014ರಲ್ಲಿ ಕೊನೆಯದಾಗಿ ಫ್ರೆಂಚ್ ಓಪನ್ ಟೂರ್ನಿಯ ಪ್ರಶಸ್ತಿ ಗೆದ್ದಿದ್ದರು. ಈ ಬಾರಿಯ ಟೂರ್ನಿಯ ಉದ್ದಕ್ಕೂ ಒಂದೇ ಒಂದು ಸೆಟ್ ಕೂಡ ಸೋಲದೆ ಫೈನಲ್ ಪ್ರವೇಶಿಸಿದ ಅವರು ಅಂತಿಮ ಹಣಾಹಣಿಯಲ್ಲೂ ಪಾರಮ್ಯ ಮೆರೆದರು.

No comments:
Post a Comment