ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಎನ್ಡಿಎ ಅಭ್ಯರ್ಥಿಯಾಗಿ ಬಿಹಾರ ರಾಜ್ಯಪಾಲರಾದ ರಾಮ್ ನಾಥ್ ಕೋವಿಂದ್ ಅವರನ್ನು ಆಯ್ಕೆ ಮಾಡಲಾಗಿದೆ.
ಸೋಮವಾರ ನಡೆದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ರಾಷ್ಟ್ರಪತಿ ಚುನಾವಣೆಗೆ ಎನ್ಡಿಎ ಅಭ್ಯರ್ಥಿಯಾಗಿ ರಾಮ್ ನಾಥ್ ಕೋವಿಂದ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸದ್ಯಕ್ಕೆ ರಾಷ್ಟ್ರಪತಿ ಅಭ್ಯರ್ಥಿ ಮಾತ್ರ ಆಯ್ಕೆ ಮಾಡಲಾಗಿದ್ದು, ಉಪರಾಷ್ಟ್ರಪತಿ ಅಭ್ಯರ್ಥಿ ಚರ್ಚೆ ಇನ್ನೂ ನಡೆದಿಲ್ಲವೆಂದು ಅಮಿತ್ ಷಾ ಹೇಳಿದ್ದಾರೆ.
Congratulations to Shri Ramnath Kovind ji on being announced as the Presidential candidate of NDA (National Democratic Alliance).
— Amit Shah (@AmitShah) June 19, 2017
ಸೋಮವಾರ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಎಂ. ವೆಂಕಯ್ಯ ನಾಯ್ಡು, ಅರುಣ್ ಜೇಟ್ಲಿ, ಸುಷ್ಮಾ ಸ್ವರಾಜ್, ನಿತಿನ್ ಗಡ್ಕರಿ, ಅನಂತ್ ಕುಮಾರ್ ಪಾಲ್ಗೊಂಡಿದ್ದರು.
ಎರಡು ಬಾರಿ ರಾಜ್ಯಸಭಾ ಸದಸ್ಯರಾಗಿದ್ದ ರಾಮನಾಥ್ ಕೋವಿಂದ (1994-2000 ಮತ್ತು 2000-2006)
ಬಿಜೆಪಿ ದಲಿತ ಮೋರ್ಚಾದ ಮಾಜಿ ಅಧ್ಯಕ್ಷ (1998 – 2002)
ಬಿಜೆಪಿಯ ರಾಷ್ಟ್ರೀಯ ಮಾಜಿ ವಕ್ತಾರ
ಅಖಿಲ ಭಾರತ ಕೋಲಿ ಸಮಾಜದ ಮಾಜಿ ಅಧ್ಯಕ್ಷ
ಪ್ರಸ್ತುತ ಬಿಹಾರದ ರಾಜ್ಯಪಾಲರಾಗಿರುವ ಕೋವಿಂದ
ಉತ್ತರ ಪ್ರದೇಶದ ಕಾನ್ಪುರ ದೆಹತ್ ಜಿಲ್ಲೆಯ ದೇರಾಪುರ ತಾಲೂಕಿನ ಪರೌಂಖ್ ಗ್ರಾಮದಲ್ಲಿ 1945 ಅಕ್ಟೋಬರ್ 1 ರಂದು ಜನನ
ಬಿಜೆಪಿ ಹಿರಿಯ ನಾಯಕರಾದ ಎಲ್.ಕೆ. ಅಡ್ವಾಣಿ ಮತ್ತು ಮುರಳಿ ಮನೋಹರ ಜೋಷಿ ಅವರಿಗೆ ರಾಮ್ ನಾಥ್ ಕೋವಿಂದ್ ಅವರ ಆಯ್ಕೆಯ ಕುರಿತು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಮಾಹಿತಿ ನೀಡಿದ್ದರು.
ತೆಲಂಗಾಣ ಮುಖ್ಯಮಂತ್ರಿ ಮತ್ತು ಟಿಆರ್ಎಸ್ ಮುಖ್ಯಸ್ಥ ಕೆ. ಚಂದ್ರಶೇಖರ್ ರಾವ್ ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿ ರಾಮ್ನಾಥ್ ಕೋವಿಂದ್ ಅವರಿಗೆ ಬೆಂಬಲ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿಗೆ ತಿಳಿಸಿದ್ದಾರೆ.
ರಾಮ್ ನಾಥ್ ಕೋವಿಂದ್ ಅವರಿಗೆ ಬೆಂಬಲ ಪಡೆಯುವ ಸಂಬಂಧ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಮತ್ತು ತಮಿಳುನಾಡು ಸಿಎಂ ಇ ಪಳನಿಸ್ವಾಮಿ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದ್ದಾರೆ.

No comments:
Post a Comment