Monday, July 17, 2017

ಪ್ರಚಲಿತ ವಿದ್ಯಮಾನ : ಜುಲೈ 2017: ಉಪ ರಾಷ್ಟ್ರಪತಿ ಚುನಾವಣೆ: ಎನ್‌ಡಿಎ ಅಭ್ಯರ್ಥಿಯಾಗಿ ವೆಂಕಯ್ಯ ನಾಯ್ಡು ಆಯ್ಕೆ ಸಾಧ್ಯತೆ

ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಕೇಂದ್ರ ಸಚಿವ ಎಂ.ವೆಂಕಯ್ಯ ನಾಯ್ಡು ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಈ ಸಂಬಂಧ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸೋಮವಾರ ಸಂಜೆ ಬಿಜೆಪಿಯ ಸಂಸದೀಯ ಮಂಡಳಿ ಸಭೆ ಕರೆಯಲಾಗಿದೆ.

ವೆಂಕಯ್ಯ ನಾಯ್ಡು ಅವರು ಸದ್ಯ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಖಾತೆ ನಿರ್ವಹಿಸುತ್ತಿದ್ದಾರೆ. ಅವರ ಹೆಸರನ್ನು ಉಪರಾಷ್ಟ್ರಪತಿ ಚುನಾವಣೆ ಅಭ್ಯರ್ಥಿಯನ್ನಾಗಿ ಘೋಷಿಸುವುದು ಬಹುತೇಕ ಖಚಿತ ಎಂದು ಬಿಜೆಪಿಯ ಉನ್ನತ ಮೂಲಗಳು ತಿಳಿಸಿವೆ.

ಚುನಾವಾಣೆ ಆಗಸ್ಟ್‌ 05ರಂದು ನಡೆಯಲಿದ್ದು, ಮಹರಾಷ್ಟ್ರ ರಾಜ್ಯಪಾಲ ಸಿ. ವಿದ್ಯಾಸಗರ್‌ ರಾವ್‌ ಅವರ ಹೆಸರೂ ಎನ್‌ಡಿಎ ಅಭ್ಯರ್ಥಿಗಳ ಪಟ್ಟಿಯಲ್ಲಿದೆ.

ನಾಮ ಪತ್ರ ಸಲ್ಲಿಕೆಗೆ ಜುಲೈ 18ಕೊನೆಯ ದಿನವಾಗಿದ್ದು, ಸದ್ಯ ಕಾರ್ಯನಿರ್ವಹಿಸುತ್ತಿರುವ ಹಮೀದ್‌ ಅನ್ಸಾರಿ ಅವರ ಅಧಿಕಾರ ಅವಧಿ ಆಗಸ್ಟ್‌ 10ಕ್ಕೆ ಕೊನೆಗೊಳ್ಳಲಿದೆ.

No comments:

Post a Comment

Kannada GK You Tube Channel

🎞 *ಕನ್ನಡ ಜ್ಞಾನ ಭಂಡಾರ - Kannada Jnana Bhandara* 🎥📚 YouTube Channel ಕನ್ನಡ ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನದ ವೀಡಿಯೋಗಳಿಗಾಗಿ ನಮ್ಮ ಯೂ ಟ್...