Wednesday, July 5, 2017

ಪ್ರಚಲಿತ ವಿದ್ಯಮಾನ : ಜುಲೈ 2017: ಮುಂದಿನ ಮುಖ್ಯ ಚುನಾವಣಾ ಆಯುಕ್ತ ಅಚಲ್‌ ಕುಮಾರ್‌ ಜ್ಯೋತಿ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ನಸೀಂ ಜೈದಿ ಗುರುವಾರ (ಜುಲೈ 6) ನಿವೃತ್ತರಾಗುತ್ತಿದ್ದು, ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ (ಸಿಇಸಿ) ಅಚಲ್‌ ಕುಮಾರ್‌ ಜ್ಯೋತಿ ಅದೇ ದಿನ ಅಧಿಕಾರ ವಹಿಸಲಿದ್ದಾರೆ ಎಂದು ಕಾನೂನು ಸಚಿವಾಲಯವು
ಅಧಿಸೂಚನೆಯಲ್ಲಿ ತಿಳಿಸಿದೆ.

ನರೇಂದ್ರ ಮೋದಿ ಅವರು ಗುಜರಾತ್‌್ ಮುಖ್ಯಮಂತ್ರಿಯಾಗಿದ್ದ ವೇಳೆ ಅಚಲ್‌ ಕುಮಾರ್‌ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿದ್ದರು.
1975ನೇ ಬ್ಯಾಚಿನ ಗುಜರಾತ್‌ ಕೇಡರ್‌ ಐಎಎಸ್‌ ಅಧಿಕಾರಿಯಾಗಿರುವ  ಅಚಲ್‌, ಗುಜರಾತ್‌ ಮುಖ್ಯ ಕಾರ್ಯದರ್ಶಿಯಾಗಿ 2013ರಲ್ಲಿ ನಿವೃತ್ತಿಯಾಗಿದ್ದರು.

ಇದಕ್ಕೂ ಮುನ್ನ ವಿಚಕ್ಷಣಾ ಆಯುಕ್ತ, ಕಾಂಡ್ಲಾ ಬಂದರು ನಿಗಮದ ಅಧ್ಯಕ್ಷ, ಸರ್ದಾರ್‌ ಸರೋವರ್‌ ನರ್ಮದಾ ನಿಗಮದ ಮುಖ್ಯಸ್ಥ, ಕೈಗಾರಿಕೆ, ಕಂದಾಯ ಹಾಗೂ ನೀರಾವರಿ ಇಲಾಖೆಯ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು. 2015ರ ಮೇ 8ರಂದು ಚುನಾವಣಾ ಆಯೋಗದ ಆಯುಕ್ತರಾಗಿ ಅವರು ಅಧಿಕಾರ ಸ್ವೀಕರಿಸಿದ್ದರು.

ಮುಖ್ಯ ಚುನಾವಣಾ ಆಯುಕ್ತ ಹಾಗೂ ಚುನಾವಣಾ ಆಯುಕ್ತರ ಅಧಿಕಾರಾವಧಿ ಐದು ವರ್ಷ ಅಥವಾ ಅವರಿಗೆ 65 ವರ್ಷದ ತನಕ ಹುದ್ದೆಯಲ್ಲಿರಬಹುದು. 21ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಲಿರುವ ಅಚಲ್‌ ಕುಮಾರ್‌ 2018ರ ಜನವರಿ ತಿಂಗಳಲ್ಲಿ ನಿವೃತ್ತರಾಗಲಿದ್ದಾರೆ.

No comments:

Post a Comment

Kannada GK You Tube Channel

🎞 *ಕನ್ನಡ ಜ್ಞಾನ ಭಂಡಾರ - Kannada Jnana Bhandara* 🎥📚 YouTube Channel ಕನ್ನಡ ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನದ ವೀಡಿಯೋಗಳಿಗಾಗಿ ನಮ್ಮ ಯೂ ಟ್...