Tuesday, July 4, 2017

ಪ್ರಚಲಿತ ವಿದ್ಯಮಾನ : ಜುಲೈ 2017 : ದೇಶೀಯ ನಿರ್ಮಿತ ಕ್ಷಿಪಣಿ ಪರೀಕ್ಷೆ ಯಶಸ್ವಿ

ಬಾಲಸೋರ್‌: ಕ್ಷಿಪ್ರ ಪ್ರತಿಕ್ರಿಯೆಗೆ ಅನುವಾಗುವ  ನೆಲದಿಂದ ಆಗಸಕ್ಕೆ ಚಿಮ್ಮುವ ದೇಶೀಯ ನಿರ್ಮಿತ ಕ್ಷಿಪಣಿ ಪರೀಕ್ಷೆ ಯಶಸ್ವಿಯಾಗಿದೆ.
ಒಡಿಶಾ ಕರಾವಳಿ ಭಾಗದ ಚಾಂಡಿಪುರದ ಸಮಗ್ರ ಪರೀಕ್ಷಾ ವಲಯದಲ್ಲಿರುವ (ಐಟಿಆರ್) ಉಡಾವಣಾ ಸಂಕೀರ್ಣ 3ರಿಂದ ಬೆಳಿಗ್ಗೆ 11.25ಕ್ಕೆ ಪರೀಕ್ಷಾರ್ಥ ಕ್ಷಿಪಣಿ ಉಡಾವಣೆ ಮಾಡಲಾಯಿತು.
ನೆಲದಿಂದ ಆಕಾಶ ಮಾರ್ಗದ 25–30 ಕಿ.ಮೀ. ವ್ಯಾಪ್ತಿಯಲ್ಲಿ ನಿಗದಿ ಪಡಿಸಿದ ಹಲವು ಗುರಿಗಳನ್ನು ತಲುಪುವ ಸಾಮರ್ಥ್ಯವಿರುವ ಕ್ಷಿಪಣಿಯನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್‌ಡಿಒ) ಅಭಿವೃದ್ಧಿಪಡಿಸಿದೆ.
ಎಲ್ಲ ವಾತಾವರಣದಲ್ಲಿಯೂ ಕ್ಷಿಪ್ರ ಕಾರ್ಯನಿರ್ವಹಿಸುವ ಸಾಮರ್ಥ್ಯವಿರುವ ಈ ಕ್ಷಿಪಣಿಯ  ಮೊದಲ ಪರೀಕ್ಷಾರ್ಥ ಉಡಾವಣೆ ಜೂನ್‌ 4ರಂದು ನಡೆಸಲಾಗಿತ್ತು.

No comments:

Post a Comment

Kannada GK You Tube Channel

🎞 *ಕನ್ನಡ ಜ್ಞಾನ ಭಂಡಾರ - Kannada Jnana Bhandara* 🎥📚 YouTube Channel ಕನ್ನಡ ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನದ ವೀಡಿಯೋಗಳಿಗಾಗಿ ನಮ್ಮ ಯೂ ಟ್...