Showing posts with label Kaarnataka. Show all posts
Showing posts with label Kaarnataka. Show all posts

Thursday, April 27, 2017

ಪ್ರಚಲಿತ ವಿದ್ಯಮಾನ : 27 ಏಪ್ರಿಲ್ 2017 : ರೂಪಾಯಿ ಆಯ್ತು ಬಡಪಾಯಿ

ಮುಂಬೈ: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಗೆಲುವು ಸಾಧಿಸಿದ ನಂತರ ನಿರಂತರವಾಗಿ ಡಾಲರ್ ಎದುರು ಕುಸಿಯುತ್ತಿರುವ ರೂಪಾಯಿ ಮೌಲ್ಯ ಗುರುವಾರ ದಾಖಲೆಯ ಕುಸಿತ ಕಂಡಿದ್ದು, ಆರು ವರ್ಷಗಳಲ್ಲಿ ಕನಿಷ್ಠ ಹಂತಕ್ಕೆ ತಲುಪಿದೆ. ಗುರುವಾರದ ವಹಿವಾಟಿನಲ್ಲಿ 30 ಪೈಸೆ ಇಳಿಕೆ ಕಂಡ ರೂಪಾಯಿ, 68.86ಕ್ಕೆ ಕುಸಿದಿತ್ತು. 2013ರ ಆಗಸ್ಟ್ 28ರಂದು ರೂಪಾಯಿ ಮೌಲ್ಯ 68.84ಕ್ಕೆ ಕುಸಿದಿತ್ತು. ಮುಂದಿನ ದಿನಗಳಲ್ಲಿ ಇದು 70 ರೂ.ಗಳಿಗೂ ಇಳಿಕೆ ಕಾಣುವ ಸಾಧ್ಯತೆಗಳಿವೆ ಎಂದು ಅಂದಾಜಿಸಲಾಗುತ್ತಿದೆ.
2016ರ ಮಾರ್ಚ್ನಿಂದ 66 ಹಾಗೂ 68.2 ದರದಲ್ಲಿ ಸ್ಥಿರತೆ ಕಾಯ್ದುಕೊಂಡಿದ್ದ ರೂಪಾಯಿ ಮೌಲ್ಯ, ಅಮೆರಿಕ ಚುನಾವಣೆಯ ನಂತರ ಗಣನೀಯ ಕುಸಿತ ಕಾಣುತ್ತಿದೆ. ನವೆಂಬರ್ 8ರಂದು 66.6 ಇದ್ದ ರೂಪಾಯಿ 15 ದಿನಗಳ ಅವಧಿಯಲ್ಲಿ ಶೇ.3.3ರಷ್ಟು ಕುಸಿತ ಕಂಡಿದೆ. ವಿದೇಶಿ ಹೂಡಿಕೆದಾರರು ಡಾಲರ್ ಕಡೆಗೆ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಭಾರತೀಯ ಷೇರು ಮಾರುಕಟ್ಟೆಯಿಂದ ವಿದೇಶಿ ಹೂಡಿಕೆದಾರರು ಬಂಡವಾಳ ವಾಪಸು ಪಡೆದುಕೊಳ್ಳುತ್ತಿದ್ದಾರೆ. ರೂಪಾಯಿ ಮೌಲ್ಯ ಕುಸಿಯುತ್ತಿದ್ದಂತೆ ಭಾರತೀಯ ರಿಸರ್ವ್ ಬ್ಯಾಂಕ್ ಮಧ್ಯಪ್ರವೇಶಿಸಲು ಮುಂದಾಗಿದೆ.
ಇತರ ಕರೆನ್ಸಿಗೂ ಪೆಟ್ಟು: ಟ್ರಂಪ್ ಆಯ್ಕೆಯಿಂದ ಭಾರತೀಯ ಕರೆನ್ಸಿ ಮಾತ್ರವಲ್ಲ, ಮೆಕ್ಸಿಕನ್ ಪೆಕ್ಸೋ(ಶೇ.11), ಟರ್ಕಿಯ ಲೀರಾ(ಶೇ.7), ಕೊಲಂಬಿಯಾದ ಪೆಸ್ಕೋ(ಶೇ.6.9), ಬ್ರೆಜಿಲ್ನ ರಿಯಲ್(ಶೇ.6.5)ನಲ್ಲೂ ಗಣನೀಯ ಕುಸಿತ ಕಂಡುಬಂದಿದೆ. -ಏಜೆನ್ಸೀಸ್
ಕುಸಿತಕ್ಕೆ ಕಾರಣಗಳೇನು?
ಟ್ರಂಪ್ ಗೆಲುವು ಸಾಧಿಸುತ್ತಿದ್ದಂತೆ ಡಾಲರ್ ಮೌಲ್ಯ 14 ವರ್ಷಗಳ ಗರಿಷ್ಠಕ್ಕೆ ತಲುಪಿದೆ. ಟ್ರಂಪ್ ಅವರು ಮೂಲ ಸೌಕರ್ಯಗಳ ಮೇಲೆ ಹೂಡಿಕೆ ಹೆಚ್ಚು ಮಾಡಿ ತೆರಿಗೆಗಳನ್ನು ಕಡಿತಗೊಳಿಸಿದಲ್ಲಿ ಹಣದುಬ್ಬರ ಹೆಚ್ಚಾಗಲಿದೆ. ಅಮೆರಿಕದ ಸೆಂಟ್ರಲ್ ಬ್ಯಾಂಕ್ ಮುಂದಿನ ತಿಂಗಳಿಂದ ಬಡ್ಡಿಯ ದರ ಹೆಚ್ಚಿಸುವ ಸೂಚನೆ ನೀಡಿದೆ. ಜತೆಗೆ ಹೂಡಿಕೆದಾರರು ಅಮೆರಿಕದ ಷೇರುಪೇಟೆಯಲ್ಲಿ ಅಪಾರ ಪ್ರಮಾಣದ ಹೂಡಿಕೆ ಮಾಡುತ್ತಿರುವುದು ರೂಪಾಯಿ ಮೌಲ್ಯ ಕುಸಿತಕ್ಕೆ ಕಾರಣ ಎನ್ನಲಾಗಿದೆ. ನವೆಂಬರ್ 8ರಿಂದ ವಿದೇಶಿ ಹೂಡಿಕೆದಾರರು ಭಾರತದಲ್ಲಿ 13 ಸಾವಿರ ಕೋಟಿ ರೂ. ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ. ಇದರಿಂದ ರೂಪಾಯಿ ಮೌಲ್ಯದ ಮೇಲೆ ಒತ್ತಡ ಉಂಟಾಗಿದೆ. ಭಾರತದಲ್ಲಿನ ನೋಟು ನಿಷೇಧ ನೀತಿ ನಂತರ ಷೇರು ಮಾರುಕಟ್ಟೆಯಲ್ಲಿ ಇಳಿಕೆ ಕಂಡುಬರುತ್ತಿದೆ. ಭಾರತ ನಿಗದಿತ ಜಿಡಿಪಿ ದಾಖಲಿಸುವುದು ಅನುಮಾನ ಎನ್ನಲಾಗುತ್ತಿದೆ. ಹೀಗಾಗಿ ದೊಡ್ಡ ಹೂಡಿಕೆದಾರರು ವಿದೇಶಗಳತ್ತ ಮುಖ ಮಾಡುತ್ತಿದ್ದಾರೆ.
70ಕ್ಕೆ ಇಳಿಕೆ
ತಜ್ಞರ ಪ್ರಕಾರ, ಮುಂಬರುವ ದಿನಗಳಲ್ಲಿ ರೂಪಾಯಿ ಮೌಲ್ಯ ಮತ್ತಷ್ಟು ಕುಸಿಯುವ ಸಾಧ್ಯತೆ ಇದೆ. ಟ್ರಂಪ್ ತೆರಿಗೆ ಕಡಿತ ಹಾಗೂ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುವುದರಿಂದ ಅಮೆರಿಕದ ಷೇರುಗಳಿಗೆ ಭಾರಿ ಬೇಡಿಕೆ ಸೃಷ್ಟಿಯಾಗಲಿದೆ. ಮುಂದಿನ ಒಂದೆರಡು ತಿಂಗಳಲ್ಲಿ ರೂಪಾಯಿ ಮೌಲ್ಯ 69.30ಕ್ಕೆ ಇಳಿಯಲಿದೆ. ಮುಂಬರುವ 7-8 ತಿಂಗಳಲ್ಲಿ ಅದು 70.51 ಇಲ್ಲವೇ 71ಕ್ಕೆ ಇಳಿಯುವ ಸಾಧ್ಯತೆಗಳಿವೆ.

Wednesday, April 26, 2017

ಪ್ರಚಲಿತ ವಿದ್ಯಮಾನ : 27 ಏಪ್ರಿಲ್ 2017 : ಕೆರೆತೊಣ್ಣೂರು: 36 ಅಡಿ ಎತ್ತರದ ರಾಮಾನುಜಾಚಾರ್ಯರ ಪ್ರತಿಮೆ

ಪಾಂಡವಪುರ: ಧಾರ್ಮಿಕ ಮತ್ತು ಸಮಾಜ ಸುಧಾರಕ ರಾಮಾನುಜಾಚಾರ್ಯರ ಸಹಸ್ರಮಾನೋತ್ಸವದ ಅಂಗವಾಗಿ ಪ್ರತಿಷ್ಠಾಪಿಸಲಾಗಿರುವ 36 ಅಡಿ ಎತ್ತರದ ಪ್ರತಿಮೆಯನ್ನು ಐತಿಹಾಸಿಕ ಪ್ರವಾಸಿ ತಾಣವಾದ ತಾಲ್ಲೂಕಿನ ಕೆರೆತೊಣ್ಣೂರಿನಲ್ಲಿ ಮಂಗಳವಾರ ಅನಾವರಣಗೊಳಿಸಲಾಯಿತು.
ಬೆಂಗಳೂರಿನ ಯದುಗಿರಿ ಯತಿರಾಜ ಮಠದಿಂದ ಪ್ರತಿಮೆಯನ್ನು ನಿರ್ಮಿಸಲಾಗಿದೆ. ಮಠದ ಪೀಠಾಧಿಪತಿ ಯತಿರಾಜ ಜೀಯರ್ ಸ್ವಾಮೀಜಿ, ಸಂಸದ ಸಿ.ಎಸ್.ಪುಟ್ಟರಾಜು ಪುಷ್ಪಾರ್ಚನೆ ಮಾಡುವುದರ ಮೂಲಕ ಅನಾವರಣಗೊಳಿಸಿದರು.
ನಂತರ ಮಾತನಾಡಿದ ಯತಿರಾಜ ಜೀಯರ್‌ ಸ್ವಾಮೀಜಿ, ‘ರಾಮಾನುಜಾಚಾರ್ಯರು 950 ವರ್ಷಗಳ ಹಿಂದೆ ತಮಿಳುನಾಡಿನಿಂದ ಅಂದಿನ ತೊಂಡನೂರು ಗ್ರಾಮಕ್ಕೆ (ಈಗ ತೊಣ್ಣೂರು) ಬಂದು 13 ವರ್ಷಗಳ ಕಾಲ ನೆಲೆಸಿದ್ದರು. ಸಾಮಾಜಿಕ, ಧಾರ್ಮಿಕ ಸುಧಾರಣೆಗಳನ್ನು ಮಾಡಿದರು’ ಎಂದು ಹೇಳಿದರು.
ಜಾತಿ ಪದ್ಧತಿ ಮತ್ತು ಅಸ್ಪ್ಯಶ್ಯತೆ ನಿವಾರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಲ್ಲದೇ ಸಮಾಜದಲ್ಲಿ ಸಾಮರಸ್ಯ ಮೂಡಿಸಲು ಶ್ರಮಿಸಿದ್ದರು. ಕೆರೆ ಹಾಗೂ ದೇವಾಲಯಗಳನ್ನು ನಿರ್ಮಾಣ ಮಾಡಿದರು. ಮೇಲುಕೋಟೆಯಲ್ಲಿ ಚಲುವನಾರಾಯಣಸ್ವಾಮಿ ಮೂರ್ತಿಯನ್ನು ಪುನರ್ ಪ್ರತಿಷ್ಠಾಪಿಸಿ ಜೀರ್ಣೋದ್ಧಾರಗೊಳಿಸಿದ್ದರು. ಅವರ ನೆನಪಿಗಾಗಿ ರಾಮಾನುಜಾಚಾರ್ಯರ ಪ್ರತಿಮೆ ಪ್ರತಿಷ್ಠಾಪಿಸಲಾಗಿದೆ ಎಂದರು.
ಕೆರೆತೊಣ್ಣೂರು ರಾಮಾನುಜಾಚಾರ್ಯರ ಕರ್ಮಭೂಮಿ, ಪುಣ್ಯಭೂಮಿ, ತಪೋಭೂಮಿಯಾಗಿತ್ತು. ಸರ್ಕಾರ ಈ ಸ್ಥಳವನ್ನು ಅಭಿವೃದ್ಧಿಗೊಳಿಸಬೇಕು. ಪ್ರತಿಮೆಯ ಸ್ಥಳದಲ್ಲಿ ಉದ್ಯಾನ ನಿರ್ಮಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಎಂ.ಕೃಷ್ಣಪ್ಪ, ‘ರಾಮಾನುಜಾಚಾರ್ಯರು ಬಂದು ನೆಲೆಸಿದ ಮೇಲೆ ಕೆರೆತೊಣ್ಣೂರು ಐತಿಹಾಸಿಕ ಸ್ಥಳವಾಗಿ ಪರಿವರ್ತನೆಯಾಯಿತು. ಅದನ್ನು ಅಭಿವೃದ್ಧಿಗೊಳಿಸಲಾಗುವುದು’ ಎಂದರು.
ಸಂಸದ ಸಿ.ಎಸ್.ಪುಟ್ಟರಾಜು ಮಾತನಾಡಿ, ‘ಪ್ರತಿಮೆ ಪ್ರತಿಷ್ಠಾಪನೆಯಿಂದಾಗಿ ಇದು ಪ್ರವಾಸಿ ತಾಣವಾಗಲಿದೆ. ಗ್ರಾಮವನ್ನು ಆದರ್ಶ ಗ್ರಾಮದಡಿ ಆಯ್ಕೆ ಮಾಡಿಕೊಂಡಿದ್ದು, ಅಭಿವೃದ್ಧಿ ಮಾಡಲಾಗುವುದು’ ಎಂದು ತಿಳಿಸಿದರು.
ಶಾಸಕರಾದ ಕೆ.ಎಸ್.ಪುಟ್ಟಣ್ಣಯ್ಯ, ಎನ್.ಚಲುವರಾಯಸ್ವಾಮಿ, ಮಾಜಿ ಸಚಿವ ಪಿ.ಜಿ.ಆರ್‌.ಸಿಂಧ್ಯಾ, ಜಿ.ಪಂ. ಸಿಇಒ ಶರತ್‌, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ರಾಧಮ್ಮ ಕೆಂಪೇಗೌಡ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಎಚ್.ತ್ಯಾಗರಾಜು, ಶಾಂತಲಾ ರಾಮಕೃಷ್ಣ ಇದ್ದರು.

ಪ್ರಚಲಿತ ವಿದ್ಯಮಾನ : 26 ಏಪ್ರಿಲ್ 2017 : ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನ ಭಾವಚಿತ್ರ: ಸಿಎಂ

ಗುಂಡ್ಲುಪೇಟೆ: ‘ಸರ್ಕಾರಿ ಕಚೇರಿಗಳಲ್ಲಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಅಳವಡಿಸುವ ಸಂಬಂಧ ಸುತ್ತೋಲೆ ಹೊರಡಿಸಲು ಸೂಚಿಸಿದ್ದೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಇಲ್ಲಿನ ಮಹದೇವ ಪ್ರಸಾದ್ ನಗರದಲ್ಲಿ ಬುಧವಾರ ನಡೆದ ಮತದಾರರಿಗೆ ಕೃತಜ್ಞತಾ ಸಮರ್ಪಣಾ ಸಲ್ಲಿಕೆ ಸಮಾವೇಶದಲ್ಲಿ ಅವರು ಮಾತನಾಡಿದರು.
ನಿನ್ನೆಯಷ್ಟೆ ಮಹಾರಾಷ್ಟ್ರ ಸರ್ಕಾರವು ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನ ಭಾವಚಿತ್ರ ಅಳವಡಿಸುವ ಸಂಬಂಧ ಆದೇಶ ಹೊರಡಿಸಿತ್ತು. ಇದರಿಂದ ಬಸವಣ್ಣನ ತವರು ರಾಜ್ಯವಾದ ಕರ್ನಾಟಕದಲ್ಲೂ ಇಂಥ ಕ್ರಮಕೈಗೊಳ್ಳಬೇಕು ಎಂಬ ಕೂಗು ವಿವಿಧ ಸ್ತರಗಳಿಂದ ಕೇಳಿ ಬಂದಿತ್ತು.
12ನೇ ಶತಮಾನದಲ್ಲಿ ಪ್ರಜಾತಂತ್ರ ವ್ಯವಸ್ಥೆಯನ್ನು ಜಾರಿಗೊಳಿಸುವ ಮೂಲಕ ಮಹತ್ತರ ಹೆಜ್ಜೆ ಇಟ್ಟಿದ್ದ ಬಸವಣ್ಣ, ಅನುಭವ ಮಂಟದ ಮೂಲಕ ಎಲ್ಲ ಸಮುದಾಯವರಿಗೂ ಸಮಾನ ಅವಕಾಶ ನೀಡುವ ನಿಯಮ ಜಾರಿಗೆ ತಂದಿದ್ದರು. ತಮ್ಮ ಕ್ರಾಂತಿಕಾರಿ ನಡೆಗಳ ಮೂಲಕ ಸಮಾಜದಲ್ಲಿನ ಅಸಮಾನತೆ, ಜಾತಿ ಪದ್ಧತಿ, ಮೌಢ್ಯದ ವಿರುದ್ಧ ಹೋರಾಟ ನಡೆಸಿದ್ದರು.

ಪ್ರಚಲಿತ ವಿದ್ಯಮಾನ : 26 ಏಪ್ರಿಲ್ 2017 : ಭಾರತೀಯರೇ, ಉನ್ನತ ವ್ಯಾಸಂಗಕ್ಕೆ ಅಮೆರಿಕಕ್ಕೆ ಬನ್ನಿ

ಭಾರತೀಯರೇ, ಉನ್ನತ ವ್ಯಾಸಂಗಕ್ಕೆ ಅಮೆರಿಕಕ್ಕೆ ಬನ್ನಿ

| ಮೇರಿ ಕೇ ಲಾಸ್ ಕಾರ್ಲ್ಸ್​ಸನ್

ಅಮೆರಿಕದ ಶಿಕ್ಷಣ ಸಂಸ್ಥೆಗಳಲ್ಲಿ 10 ಲಕ್ಷಕ್ಕೂ ಅಧಿಕ ವಿದೇಶಿ ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಪಡೆಯುತ್ತಿದ್ದು, ಇದರಲ್ಲಿ ಭಾರತೀಯ ವಿದ್ಯಾರ್ಥಿಗಳ ಪ್ರಮಾಣ 1.66 ಲಕ್ಷದಷ್ಟಿದೆ. ಕಳೆದೆರಡು ವರ್ಷಗಳಿಂದ ಉನ್ನತ ವಿದ್ಯಾಭ್ಯಾಸಕ್ಕಾಗಿ ಅಮೆರಿಕಕ್ಕೆ ತೆರಳುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಏರಿಕೆಯಾಗುತ್ತಿದೆ. ಈ ವರ್ಷವೂ ಅಮೆರಿಕದ 4,500 ಪ್ರಮಾಣೀಕೃತ ಶೈಕ್ಷಣಿಕ ಸಂಸ್ಥೆಗಳಿಂದ ಉನ್ನತ ವ್ಯಾಸಂಗಕ್ಕೆ ದಾಖಲಾಗುವಂತೆ ಭಾರತೀಯ ವಿದ್ಯಾರ್ಥಿಗಳಿಗೆ ಆಹ್ವಾನ ಕಳುಹಿಸಲಾಗಿದ್ದು, ಅವರಿಗೆಲ್ಲಾ ಅಭಿನಂದನೆಗಳು. ಅಮೆರಿಕ ವಿಶ್ವವಿದ್ಯಾಲಯಗಳಲ್ಲಿ ಓದಿ ಪದವಿ ಪಡೆದವರೆಲ್ಲ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಾರೆ. ಉಭಯ ದೇಶಗಳ ವಿದ್ಯಾರ್ಥಿಗಳು ಮತ್ತು ವಿಶ್ವವಿದ್ಯಾಲಯಗಳ ನಡುವಣ ಸಹಭಾಗಿತ್ವಕ್ಕೆ ಒತ್ತಾಸೆ ನೀಡುವುದು ಅಮೆರಿಕದ ರಾಯಭಾರ ಕಚೇರಿಯ ಪ್ರಮುಖ ಆದ್ಯತೆಯಾಗಿದ್ದು, ಪ್ರತಿಭಾವಂತ ಭಾರತೀಯ ವಿದ್ಯಾರ್ಥಿಗಳನ್ನು ಸ್ವಾಗತಿಸಲು ನಾವು ಎದುರು ನೋಡುತ್ತಿದ್ದೇವೆ.

ಅಮೆರಿಕದಲ್ಲಿ ಓದುವ ಬಗ್ಗೆ ಚಿಂತನೆ ನಡೆಸುತ್ತಿದ್ದರೆ, ಕೂಲಂಕಷವಾದ ಪರಿಶೀಲನೆ ಅಗತ್ಯವಾಗಿದೆ. ತುಲನೆ ಮಾಡಿ ಅತ್ಯುತ್ತಮವಾದುದನ್ನು ಆಯ್ದುಕೊಳ್ಳಬೇಕು. ಎಜ್ಯುಕೇಶನ್​ಯುುಎಸ್​ಎ (educationusa.state.gov)ಗೆ ಭೇಟಿ ನೀಡಿ ಶೈಕ್ಷಣಿಕ ಸಂಸ್ಥೆಗಳು, ಲಭ್ಯವಿರುವ ಕೋರ್ಸ್​ಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಬಹುದಾಗಿದೆ. ಭಾರತದಲ್ಲಿ ಏಳು ಎಜ್ಯುಕೇಶನ್ ಯುಎಸ್​ಎ ಸಲಹಾ ಕೇಂದ್ರಗಳಿದ್ದು, ಇವುಗಳಿಂದಲೂ ನಿಖರ ಮತ್ತು ಸಮಗ್ರ ಮಾಹಿತಿ ಸಿಗುತ್ತವೆ. ಈ ಬಾರಿ ಎಜ್ಯುಕೇಷನ್​ಯುುಎಸ್​ಎ ಭಾರತದ 7 ನಗರಗಳು ಮತ್ತು ಸಲಹಾಕೇಂದ್ರಗಳಿಗೆ ಭೇಟಿ ನೀಡಲಿದೆ. ಅಮೆರಿಕದ ಶಿಕ್ಷಣ ಸಂಸ್ಥೆಗಳು ವೈವಿಧ್ಯತೆಗೆ ಆದ್ಯತೆ ನೀಡುತ್ತಿದ್ದು, ವಿಭಿನ್ನ ಹಿನ್ನೆಲೆಯ ವಿದ್ಯಾರ್ಥಿಗಳನ್ನು ಬೆಂಬಲಿಸುತ್ತದೆ. ವಿದ್ಯಾರ್ಥಿಗಳು ಹೊತ್ತುತರುವ ವಿಶಿಷ್ಟ ಮತ್ತು ವೈವಿಧ್ಯಮಯ ದೃಷ್ಟಿಕೋನಗಳನ್ನು ಅಮೆರಿಕದ ವಿಶ್ವವಿದ್ಯಾಲಯಗಳು ಮತ್ತು ಶೈಕ್ಷಣಿಕ ಸಂಸ್ಥೆಗಳು ಗೌರವಿಸುತ್ತವೆ. ಸದ್ಯದ ಅಂಕಿಅಂಶಗಳಂತೆ ಅಮೆರಿಕಕ್ಕೆ ಉನ್ನತ ವ್ಯಾಸಂಗ ಪಡೆದುಕೊಳ್ಳಲು ಬರುವ ಪ್ರತಿ ಆರು ವಿದೇಶಿ ವಿದ್ಯಾರ್ಥಿಗಳಲ್ಲಿ ಓರ್ವ ಭಾರತೀಯನಿರುತ್ತಾನೆ. ಇವರು ಶೈಕ್ಷಣಿಕವಾಗಿ ಉತ್ತಮ ಸಾಧನೆ ತೋರಿದ್ದು, ವಿಶ್ವವಿದ್ಯಾಲಯ ಮತ್ತು ತಮ್ಮ ಸುತ್ತಮುತ್ತಲಿನ ಸಮುದಾಯಕ್ಕೆ ಅಪಾರ ಕೊಡುಗೆ ನೀಡುತ್ತಿದ್ದಾರೆ. ಅಮೆರಿಕಕ್ಕೆ ಭಾರತೀಯ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಕಲ್ಯಾಣ ಪ್ರಮುಖ ಆದ್ಯತೆಯಾಗಿದ್ದು, ಇದಕ್ಕಾಗಿಯೇ ನೂತನ ಆಂದೋಲನ You Are Welcome Here ಅಮೆರಿಕದ ವಿವಿಗಳು ನಡೆಸುತ್ತಿವೆ. ಇಲ್ಲಿನ ವಿವಿಗಳ ಕ್ಯಾಂಪಸ್ಸಿನ ಗುಣಮಟ್ಟ ಉತ್ತಮವಾಗಿದ್ದು, ಈ ಹಿಂದೆ ಇಲ್ಲಿ ವಿದ್ಯಾಭ್ಯಾಸ ಪಡೆದುಕೊಂಡಿರುವ ಭಾರತೀಯ ವಿದ್ಯಾರ್ಥಿಗಳು ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಳೆದ ನವೆಂಬರ್​ನಲ್ಲಿ ಅಂತಾರಾಷ್ಟ್ರೀಯ ಶಿಕ್ಷಣ ಸಪ್ತಾಹದ ಅಂಗವಾಗಿ ಅಮೆರಿಕ ರಾಯಭಾರ ಕಚೇರಿ ಸರಣಿ ವಿಡಿಯೋಗಳನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಭಾರತೀಯ ವಿದ್ಯಾರ್ಥಿಗಳು ತಮ್ಮ ಅನುಭವ ಹಂಚಿಕೊಂಡಿದ್ದಾರೆ. ನಿಮ್ಮ ಬದುಕು ಮತ್ತು ವೃತ್ತಿಜೀವನದ ಗುರಿಗಳನ್ನು ತಲುಪಲು ನೆರವಾಗುವ ನಿಟ್ಟಿನಲ್ಲಿ ಮೌಲ್ಯಯುತ ಶೈಕ್ಷಣಿಕ ಅವಕಾಶಗಳನ್ನು ಒದಗಿಸುವ ನಮ್ಮ ಕಾಲೇಜುಗಳು ನಿಮ್ಮ ಸ್ವಾಗತಕ್ಕೆ ಸಜ್ಜಾಗಿವೆ. ಅವರೊಂದಿಗೆ ನಾನೂ ದನಿ ಗೂಡಿಸುತ್ತಿರುವೆ ಅಮೆರಿಕಕ್ಕೆ ನಿಮಗಿದೋ ಸ್ವಾಗತ.

Tuesday, November 3, 2015

Key Answers: Sr. & Jr Asst. In Food and Civil Supplies Examination Held on 03-10-2015

KPSC has released the key answers for the Sr. & Jr Asst. In Food and Civil Supplies Examination Held on 03-10-2015.

Below are the key answers for all four booklet series i.e. A, B, C & D.

Key Answer for Booklet Series – A: ( ಪ್ರಶ್ನೆಪತ್ರಿಕೆ ಸೀರಿಸ್ A - ಕೀ ಉತ್ತರಗಳು  )



Key Answer for Booklet Series – B: ( ಪ್ರಶ್ನೆಪತ್ರಿಕೆ ಸೀರಿಸ್ B - ಕೀ ಉತ್ತರಗಳು  )



Key Answer for Booklet Series – C: ( ಪ್ರಶ್ನೆಪತ್ರಿಕೆ ಸೀರಿಸ್ B - C ಉತ್ತರಗಳು  )


Key Answer for Booklet Series – D: ( ಪ್ರಶ್ನೆಪತ್ರಿಕೆ ಸೀರಿಸ್  D - ಕೀ ಉತ್ತರಗಳು  )

ಅಭಿನಂದನೆಗಳು
ಟೀಂ ಕೆ.ಪಿ.ಎಸ್.ಸಿ ಯುಪಿಎಸ್ಸಿ ಟಾಪರ್
Team KPSC & UPSC Topper

Kannada GK You Tube Channel

🎞 *ಕನ್ನಡ ಜ್ಞಾನ ಭಂಡಾರ - Kannada Jnana Bhandara* 🎥📚 YouTube Channel ಕನ್ನಡ ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನದ ವೀಡಿಯೋಗಳಿಗಾಗಿ ನಮ್ಮ ಯೂ ಟ್...